Breaking News

ಲಂಚಕ್ಕಾಗಿ ಹಿರಿಯ ಪೊಲೀಸ್ ಅಧಿಕಾರಿಯ ಒತ್ತಡ: ಪೊಲೀಸ್ ಪೇದೆಯಿಂದ ದಯಾಮರಣಕ್ಕೆ ಆಗ್ರಹ!

ವಿಜಯಪುರ – ತನ್ನ ಹಿರಿಯ ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತ ಪೊಲೀಸ್ ಪೇದೆಯೊಬ್ಬರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ಕೋರಿದ್ದಾರೆ. ಈ ಪತ್ರವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಯುವ ಸಾಧ್ಯತೆಯಿದೆ. ಈ ಪತ್ರದಲ್ಲಿ ಪೇದೆಯು , “ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿಕೊಳ್ಳಲು, ಆದರ್ಶನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ (PSI) ಸೀತಾರಾಮ್ ಲಮಾಣಿ ಅವರು ಲಂಚ ನೀಡುವಂತೆ ನನ್ನ ಮೇಲೆ ಸತತವಾಗಿ ಒತ್ತಡ ಹೇರುತ್ತಿದ್ದಾರೆ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಪ್ರತಿಯೊಂದು ವಿಷಯದಲ್ಲೂ ಹಣದ ಬೇಡಿಕೆ ಇಡುತ್ತಾರೆ ಮತ್ತು ಹಣ ನೀಡದಿದ್ದರೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಪೀಡಿಸುತ್ತಾರೆ. ಅವರ ಈ ವರ್ತನೆಯಿಂದಾಗಿ ನನಗೆ ಶಾಂತಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮ ನನ್ನ ಕುಟುಂಬದ ಮೇಲೆಯೂ ಬೀರಿದೆ” ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *