ಬೆಂಗಳೂರು/ಧಾರವಾಡ:ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು ಕಂಡಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿದೆ.ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದ ಕೋರ್ಟ್, ಇದೀಗ ನಾಳೆ (ಏಪ್ರಿಲ್ 17) ಅಂತಿಮ ಶಿಕ್ಷೆಯ ಆದೇಶ ಪ್ರಕಟಿಸುವುದಾಗಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತಿಳಿಸಿದ್ದಾರೆ. ನಾಳೆ ಪ್ರಕಟವಾಗುವ ಶಿಕ್ಷೆಯ ತೀರ್ಪು – ರಾಜ್ಯ ರಾಜಕೀಯದ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ!
bigtvnews | Hubli Dharwad News | Kannada News | Karnataka News Hubli News | News In Hubli | Local news

