Breaking News

ಕೆಆರ್ ಪುರದಲ್ಲಿ ಮಿನಿ ಟೆಂಪೋ ಅಪಘಾತ: ಸಾವಿರಾರು ಮೊಟ್ಟೆ ನಾಶ!

ಮೊಟ್ಟೆ ಸಾಗಿಸುತ್ತಿದ್ದ ಮಿನಿ ಟೆಂಪೋ ಅಪಘಾತಕ್ಕೀಡಾಗಿ ಸಾವಿರಾರು ಮೊಟ್ಟೆಗಳು ನಾಶವಾದ ಘಟನೆ ಕೆಆರ್ ಪುರದ ಟಿಸಿ ಪಾಳ್ಯ ಸಿಗ್ನಲ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಮಿನಿ ಟೆಂಪೋಗೆ ಹಿಂದಿನಿಂದ ಬಂದ ಬೃಹತ್ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನದಲ್ಲಿ ತುಂಬಿದ್ದ ಮೊಟ್ಟೆಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಪೂರ್ಣ ಹಾನಿಗೊಂಡಿವೆ. ಮಾರುಕಟ್ಟೆಗೆ ಸಾಗಿಸಲಾಗುತ್ತಿದ್ದ ಈ ಮೊಟ್ಟೆಗಳು ಅಪಘಾತದಿಂದ ನಾಶವಾಗಿದ್ದು, ವ್ಯಾಪಾರಿಗಳಿಗೆ ದೊಡ್ಡ ನಷ್ಟ ಉಂಟಾಗಿದೆ. ಘಟನೆ ಬಳಿಕ ರಸ್ತೆ ಮೇಲೆ ಮೊಟ್ಟೆಗಳು ಹರಡಿಕೊಂಡಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಟ್ರಾಫಿಕ್ ಜಾಮ್ ಕಂಡುಬಂದಿತು. ಸುದ್ದಿ ತಿಳಿದು ಸ್ಥಳಕ್ಕೆ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ, ರಸ್ತೆ ಸ್ವಚ್ಛಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *