ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಶಿವನಗರದ ನಿವಾಸಿ ಎಂ. ಬಾಬು (52), ಎಂಬಾತನನ್ನು ಮಲ್ಪೆ ಪೊಲೀಸರು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆ ಉಪ ನಿರೀಕ್ಷಕ ಅನಿಲ್ ಕುಮಾರ್ ಡಿ.ನೇತೃತ್ವದಲ್ಲಿ 5 ತಿಂಗಳುಗಳಿಂದ ಆರೋಪಿಯ ಬಂಧನಕ್ಕೆ ಪ್ರಯತ್ನ ನಡೆದಿತ್ತು. ಕೊನೆಗೂ ಖಚಿತ ಮಾಹಿತಿ ಮೇರೆಗೆ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಎಚ್. ಅವರು ಎ.12ರಂದು ಬೆಂಗಳೂರಿಗೆ ತೆರಳಿ ಎ.14ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ. ಆರೋಪಿಗೆ ಎ.28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

