Breaking News

ಅಕ್ರಮ ಗಣಿಕಾರಿಕೆ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಎಂಬಲ್ಲಿನ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮನೋಜ್‌ ಮತ್ತು ಶರಣ್‌ ಎಂಬವವರ ವಿರುದ್ಧ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್‌ ಲಾರಿ ಚಾಲಕರಿಬ್ಬರು ಸೇರಿಕೊಂಡು ಕಲ್ಲುಗಳನ್ನು ಕಳವು ಮಾಡಿ ಸಾಗಾಟ ಮಾಡಲು ಲೋಡ್ ಮಾಡುತ್ತಿದ್ದು ಅವರನ್ನು ಬಂಧಿಸಿ ಕಲ್ಲು ತೆಗೆಯಲು ಉಪಯೋಗಿಸಿದ ಸಲಕರಣೆಗಳನ್ನು, ಸೈಜ್‌ ಕಲ್ಲುಗಳನ್ನು ಲೋಡ್‌ ಮಾಡಿದ ಟಿಪ್ಪರ್ ಮತ್ತು ಖಾಲಿ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *