Breaking News

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ: 1.5 ಕೆಜಿ ಗಾಂಜಾ ವಶ

ಮುಳಬಾಗಿಲು: ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬುಧವಾರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿ, ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಮುಳಬಾಗಿಲು ನಗರದ ಶಾಮೀರ್ ಮೊಹಲ್ಲ ನಿವಾಸಿ ಅಬೂಕರ್ (22) ಬಂಧಿತ ಆರೋಪಿ. ಆರೋಪಿಯಿಂದ 1.5 ಕೆಜಿ ಗಾಂಜಾ ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಇನ್‌ಸ್ಪೆಕ್ಟರ್ ಎಂ.ಆರ್. ಅಣ್ಣಯ್ಯ ಮತ್ತು ಸಿಬ್ಬಂದಿ ದಾಳಿ ನಡೆಸಿ, ಗಾಂಜಾ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *