ಹುಬ್ಬಳ್ಳಿ: ಲವ್ ಜಿಹಾದ್ ಆರೋಪ ಹಾಗೂ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬೂದಿಹಾಳನನ್ನು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್‌ನಲ್ಲಿ ಯುವತಿಯರ ಜೊತೆಗಿನ ವಿಡಿಯೋ ಹಾಗೂ ಗಾಂಜಾ ಸೇವನೆಗೆ ಸಂಬಂಧಿಸಿದ ತುಣುಕುಗಳು ಲಭ್ಯವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆ ಮಾಡಿದ್ದರು. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯು ಪರಾರಿಯಾಗಿ ಗೋವಾದಲ್ಲಿ ಅಡಗಿ ಕುಳಿತಿದ್ದ. ಈ ವೇಳೆ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಒಂದು ವಾರದ ಬಳಿಕ ಆರೋಪಿಯು ಪೊಲೀಸರ ಬಲೆಗೆ ಬಿದ್ದಿದ್ದು, ಸದ್ಯ ಪೊಲೀಸರು ಆರೋಪಿಯನ್ನ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

