Breaking News

ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಬೆಂಕಿ!

ಹುಳಿಯಾರು : ಪಟ್ಟಣದ ಕನಕ ಸರ್ಕಲ್​ ಬಳಿಯ ಪ್ರವಾಸಿ ಮಂದಿರದ ಹತ್ತಿರ ಗುರುವಾರ ಮಧ್ಯಾಹ್ನ ಕೆಎಸ್​ಆರ್​ಟಿಸಿ ಬಸ್​ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಳಿಯಾರಿನಿಂದ ಅರಸೀಕೆರೆಗೆ ಹೊರಟಿದ್ದ ಬಸ್​ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರವಾಸಿ ಮಂದಿರದ ಬಳಿ ಚಲಿಸುತ್ತಿದ್ದಾಗ ಇಂಜಿನ್​ ಭಾಗದ ಡೀಸೆಲ್​ ಪೈಪ್​ ತುಂಡಾದ ಪರಿಣಾಮ ಬ್ಯಾಟರಿ ಕೇಬಲ್​ನಲ್ಲಿ ಶಾರ್ಟ್​ ಸಕ್ಯೂರ್ಟ್​ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬಸ್​ ಒಳಗೆ ದಟ್ಟವಾದ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರು ಆತಂಕಕ್ಕೊಳಗಾದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅಕ್ಕಪಕ್ಕದ ಅಂಗಡಿಯವರು ಚಾಲಕನ ಗಮನಕ್ಕೆ ತಂದಿದ್ದಾರೆ. ಅದೃಷ್ಟ್ಟವಶಾತ್​ ಬಸ್​ನ ಹಿಂಭಾಗದ ಬಾಗಿಲು ತೆರೆದಿದ್ದರಿಂದ ಪ್ರಯಾಣಿಕರು ಸುರತವಾಗಿ ಕೆಳಗಿಳಿಯಲು ಸಾಧ್ಯವಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳಿಯರು ಮರಳು ಮತ್ತು ನೀರನ್ನು ಹಾಕಿ ಬೆಂಕಿ ನಂದಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದರು. ಈ ಘಟನೆಯು ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆಯ ತುರ್ತು ಅಗತ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಸರ್ಕಾರದ ವಿಳಂಬ ನೀತಿಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *