Breaking News

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು.ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ (18) ಎಂಬ ಯುವತಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾಳೆ. ಅತ್ತೆ ಮನೆಯಲ್ಲಿ ಇರುವಾಗ ಸ್ವಲ್ಪ ಕೆಲಸ ಮಾಡಬೇಕಮ್ಮ, ನನಗೂ ಸ್ವಲ್ಪ ಸಹಾಯ ಆಗುತ್ತದೆ. ಸುಮ್ಮನೆ ಇರುವ ಬದಲು ಅಡುಗೆ ಮಾಡುವುದನ್ನು ಕಲಿ ಎಂದು ಹೇಳಿದರು. ಅತ್ತೆ ಹೇಳಿದ ರೀತಿ ಇಲ್ಲ ಎಂದು ಶ್ರುತಿ ಅಪಾರ್ಥ ಮಾಡಿಕೊಂಡು ಇದರಿಂದ ತೀವ್ರವಾಗಿ ಮನನೊಂದುಕೊಂಡಿದ್ದಾಳೆ. ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಸಾರದ ಸಣ್ಣಪುಟ್ಟ ವಿಚಾರಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಇಂತಹ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದು ತಪ್ಪು, ಇಂತಹ ಕ್ಷುಲ್ಲಕ ಕಾರಣಕ್ಕೆ ಜೀವ ಕಳೆದುಕೊಳ್ಳುವುದು ಸರಿಯಲ್ಲ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *