Breaking News

ಚಿತ್ರದುರ್ಗ | ವಿದ್ಯಾನಗರದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ; ಇಬ್ಬರ ಬಂಧನ

ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ
ವಿದ್ಯಾ ನಗರದ 5 ನೇ ಕ್ರಾಸ್‌ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಕಾನೂನು ಬಾಹಿರವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತವಾದ ಮಾಹಿತಿ ಮೇರೆಗೆ ಈ ದಾಳಿ ಮಾಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ನಗರ ಮತ್ತು ಮಹಿಳಾ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ವೇಶ್ಯಾವಾಟಿಕೆಯ ಬಗ್ಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲೆಯ ಎಸ್.ಪಿ ರಂಜಿತ್‌ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *