Breaking News

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಮನೆ; 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!

ಚಿತ್ರದುರ್ಗ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳವು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಹಶೀಲ್ದಾರ್ ರೇಹಾನ್ ಪಾಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *