Breaking News

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ ಪೆನ್ನಿ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಾಗೇಶ್ ಭಗತ್ ಎಂಬಾತನು ಮುಂಬೈಯಿಂದ ಪೆನ್ನಿ ಡ್ರಗ್ಸ್ ತರಿಸಿಕೊಂಡು ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಮಾರಾಟ ಮಾಡುತ್ತಿದ್ದನೆಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಪೊಲೀಸರು ಬರುತ್ತಿರುವುದು ತಿಳಿದ ಆರೋಪಿಯು ಡ್ರಗ್ಸ್ ಚೀಟಿಗಳನ್ನು ಮನೆಯಲ್ಲಿ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದನು ಎನ್ನಲಾಗಿದೆ. ಪೊಲೀಸ್ ಶ್ವಾನ ‘ಆದಿತಿ’ ವಾಸನೆ ಆಧಾರದ ಮೇಲೆ ಅಡಗಿಸಿದ್ದ ಡ್ರಗ್ಸ್ ಅನ್ನು ಪತ್ತೆ ಹಚ್ಚಿ ಪೊಲೀಸರಿಗೆ ಸುಳಿವು ನೀಡಿತು. ಪೊಲೀಸರ ದಾಳಿಯಲ್ಲಿ ಸುಮಾರು 13 ಗ್ರಾಂ ಪೆನ್ನಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದ್ದು, ಅದರ ಮೌಲ್ಯ ಸುಮಾರು 2.60 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಪ್ರಕರಣ ಸಂಬಂಧ ನಾಗೇಶ್ ಭಗತ್ ಹಾಗೂ ರಾಹುಲ್ ಜಾಧವ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *