Breaking News

ಜಮಖಂಡಿ ಅರಣ್ಯದಲ್ಲಿ ಕಾಡ್ಗಿಚ್ಚು- ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮ

ಬಾಗಲಕೋಟೆ: ಜಮಖಂಡಿಯ ಶಾಂತಿನಗರದ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಕಾಡ್ಗಿಚ್ಚು ವ್ಯಾಪಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಎಕರೆಗಿಂತಲೂ ಹೆಚ್ಚಿನ ಭೂಭಾಗ ಸುಟ್ಟು ಭಸ್ಮವಾಗಿದೆ. ಇನ್ನು ಗಾಳಿ ಹೆಚ್ಚಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ ಕಾರಣ ಅರಣ್ಯಕ್ಕೆ ವೇಗವಾಗಿ ಹಬ್ಬಿದ್ದು, ಬಹುಪಾಲು ಪ್ರದೇಶ ಸಂಪೂರ್ಣಬೆಂಕಿಗೆ ಆಹುತಿಯಾಗಿದೆ. ಈ ಪ್ರಕೃತಿಯ ವಿಕೋಪದಿಂದಾಗಿ ಇಲ್ಲಿನ ಅಮೂಲ್ಯವಾದ ಗಿಡಮೂಲಿಕೆಗಳು ಹಾಗೂ ವೈವಿಧ್ಯಮಯ ಸಸ್ಯರಾಶಿ ಅಗ್ನಿಪಾಲಾಗಿದ್ದು, ಸ್ಥಳೀಯ ವನ್ಯಜೀವಿಗಳಿಗೂ ಸಾಕಷ್ಟು ಹಾನಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲು ಸತತವಾಗಿ ಶ್ರಮಿಸುತ್ತಿದೆ. ಪ್ರಾಣಿ ಸಂಕುಲವನ್ನು ರಕ್ಷಿಸಲು ಮತ್ತು ಹಾನಿಯ ಪ್ರಮಾಣವನ್ನು ತಗ್ಗಿಸಲು ಕಾರ್ಯಾಚರಣೆ ತೀವ್ರಗೊಂಡಿದೆ.

Share News

About BigTv News

Check Also

ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಅತ್ಯಾಚಾರ ಎಸಗಿರುವ …

Leave a Reply

Your email address will not be published. Required fields are marked *