Breaking News

ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಎ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಬಾಲಕಿಯ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ಎ.17ರಂದು ದೂರು ನೀಡಿದ್ದಾರೆ. ದೂರಿನನ್ವಯ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶನಿವಾರ ಸಂಜೆ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಆರೋಪಿಗಳ ಪೈಕಿ ಸುಮಂತ್ ಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *