ಕೆಜಿಎಫ್: ಮಾದಕ ವಸ್ತುಗಳ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿರುವ ಕೆಜಿಎಫ್ ಪೊಲೀಸರು, ಪ್ರತ್ಯೇಕ ಕಡೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 410 ಗ್ರಾಂ ಗಾಂಜಾ ಹಾಗೂ 2 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನಗರದ ಅಜಯ್ಕುಮಾರ್ (26), ಮೊಹಮ್ಮದ್ ಯೂಸೂಫ್ (22) ಯಕ್ಷಗೋರ್ ಶರ್ಮ ಬಂಧಿತರು. ಸಂಜಯ್ ಗಾಂಧಿ ನಗರದಿಂದ ಇ.ಟಿ ಬ್ಲಾಕ್ ಕಡೆಗೆ ಹೋಗುವ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಅಜಯ್ ಕುಮಾರ್ನನ್ನು ಬಂಧಿಸಿ, 174 ಗ್ರಾಂ ಗಾಂಜಾ, 2 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ರಾಬರ್ಟಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಕಾರ್ಯಾಚರಣೆಯಲ್ಲಿ, ಕೆಎನ್ಜೆಎಸ್ ಬ್ಲಾಕ್ನ ಮುನೇಶ್ವರಸ್ವಾಮಿ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಯೂಸೂಫ್ ಮತ್ತು ಯಕ್ಷಗೋರ್ ಶರ್ಮನನ್ನು ಬಂಧಿಸಿ, 236 ಗ್ರಾಂ ಗಾಂಜಾ ವಶಪಡಿಸಿಕೊಂಡು ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಡಿವೈಎಸ್ಪಿ ವಿ. ಲಕ್ಷ್ಮಯ್ಯ ಮಾರ್ಗದರ್ಶನದಲ್ಲಿ ಉರಿಗಾಂ ವೃತ್ತ ನಿರೀಕ್ಷಕ ಮಾರ್ಕೊಂಡಯ್ಯ, ರಾರ್ಬಟ್ಸನ್ಪೇಟೆ ವೃತ್ತ ನಿರೀಕ್ಷಕ ಅನಿಲ್ಕುಮಾರ್, ಪಿಎಸ್ಐಗಳಾದ ಮಹೇಶ್ ಮಾಲಿ, ಕೃಷ್ಣಮೂರ್ತಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
