Breaking News

ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಎರಡು ಮನೆಗಳು ಭಸ್ಮ!

ತುಮಕೂರಲ್ಲಿ ಭೀಕರ ದುರಂತ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿದೆ. ತಿಪಟೂರು ತಾಲೂಕಿನ ನೋಣವಿನಕೆರೆಯ ಮಾಟನಹಳ್ಳಿ ಗ್ರಾಮದಲ್ಲಿ ಅವಘಡ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಎರಡು ಮನೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವೆಂಕಟರಮಣಗೌಡ ಮತ್ತು ಸಣ್ಣತಿಮ್ಮೇಗೌಡಗೆ ಸೇರಿದ ಮನೆಗಳು ಬೆಂಕಿಗೆ ಆಹುತಿಯಾಗಿದ್ದು,15 ಸಾವಿರ ಕೊಬ್ಬರಿ, ಲಕ್ಷಾಂತರ ರೂಪಾಯಿ ನಗದು, ಚಿನ್ನಾಭರಣ ಹಾಗೂ ಆಹಾರ ಧಾನ್ಯಗಳು ಬೆಂಕಿಗಾಹುತಿಯಾಗಿದೆ. ಇನ್ನು, ಅಗ್ನಿಶಾಮಕ ದಳದ ಸಿಬ್ಬಂದಿ ವಿಷಯ ತಿಳಿದು ಸ್ಥಳಕ್ಕಾಗಮಿಸುವ ವೇಳೆಗೆ ಎಲ್ಲವೂ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೊಣವಿನಕೆರೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ನೋಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *