Breaking News

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೋಗೆ ವಿದ್ಯುತ್ ತಂತಿ ತಗುಲಿ ಬೆಂಕಿ: ನಡುರಸ್ತೆಯಲ್ಲಿ ಧಗಧಗ

ಯಾದಗಿರಿ ಜಿಲ್ಲೆಯ ವಡಗೇರಾ ಬಳಿ, ಒಣ ಹುಲ್ಲು ಸಾಗಿಸುತ್ತಿದ್ದ ಬೊಲೆರೋ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ನಡುರಸ್ತೆಯಲ್ಲಿ ಬೆಂಕಿಗಾಹುತಿಯಾದ ಲಾರಿ ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೂಡಲೇ ಬೊಲೆರೋ ವಾಹನದಲ್ಲಿದ್ದ ಚಾಲಕ ಸೇರಿ ಮೂವರು ವಾಹನದಿಂದ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗ ಬೊಲೆರೋ ವಾಹನ ಸುಟ್ಟು ಕರಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ಈ ಬೊಲೆರೋ ವಾಹನ ಸೂಗೂರಿನಿಂದ ದೇವದುರ್ಗದ ಕಡೆಗೆ ಒಣ ಹುಲ್ಲು ತುಂಬಿಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಬೋರ್‌ವೆಲ್‌ಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಈ ಅವಘಡ ಸಂಭವಿಸಿದ್ದು, ಬೊಲೆರೋ ವಾಹನ ಸಂಪೂರ್ಣ ಬೆಂಕಿಗಾಹುತಿಯಾಗಿರುವುದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *