Breaking News

ಮಂಗಳೂರು: 46 ಲಕ್ಷ ಮೌಲ್ಯದ MDMA ವಶ; ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು ಎಪ್ರಿಲ್ 19: ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ ಮಡ್ಮ ವಶಪಡಿಸಿಕೊಳ್ಳಲಾಗಿದೆ.ಬಂಧಿತರನ್ನು ಪಿಲಾರು ಹೊಸಗದ್ದೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ಈತನ ಸಹಚರ ನಜರತ್ ಅಲಿ (37) ಬಂಧಿತರು. ಆರೋಪಿಗಳು ಬೈಕ್‌ನಲ್ಲಿ ಮಾದಕ ವಸ್ತುವನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ಪ್ರಮುಖ ಆರೋಪಿ ಪರ್ವೇಜ್ ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಡ್ರಗ್ಸ್ ತಂದು ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈತನ ವಿರುದ್ಧ ಈಗಾಗಲೇ ಪಾಂಡೇಶ್ವರ, ಬಂದರು, ವಾಮಂಜೂರು, ಬೆಂಗಳೂರಿನ ಅಮೃತಹಳ್ಳಿ ಹಾಗೂ ಉಡುಪಿ ಸೆನ್ ಠಾಣೆಗಳಲ್ಲಿ ಡ್ರಗ್ಸ್ ಮಾರಾಟದ ಪ್ರಕರಣಗಳು ದಾಖಲಾಗಿದ್ದು, ಈತ ಓರ್ವ ರೂಢಿಗತ ಅಪರಾಧಿಯಾಗಿದ್ದಾನೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *