Breaking News

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಆರ್‌ಟಿಒ ಅಧಿಕಾರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಬೆಂಗಳೂರು : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತನೊಬ್ಬ ಕರೆ ಮಾಡಿ ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ(ಆರ್‌ಟಿಒ) ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.ಪ್ರಸಾದ್ ಶಿವದಾಸ್ ನಾಲ್ವಡೆ ಎಂಬವರು ನೀಡಿದ ದೂರಿನನ್ವಯ ಅಪರಿಚಿತನ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ, ಪ್ರಸಾದ್ ಶಿವದಾಸ್ ನಾಲ್ವಡೆ ನೀಡಿದ ದೂರಿನಂತೆ ಮಹಾರಾಷ್ಟ್ರದ ಕಾಶಿಗಾಂವ್ ಠಾಣೆಯ ಪೊಲೀಸರು ಶೂನ್ಯ ಎಫ್‍ಐಆರ್ ದಾಖಲಿಸಿದ್ದರು. ಬಳಿಕ ಘಟನೆ ನಡೆದ ಆಧಾರದ ಮೇಲೆ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಗೆ ಪ್ರಕರಣ ವರ್ಗಾವಣೆಯಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *