ನೆಲಮಂಗಲ: ಯುವಕನೊಬ್ಬ ಕಷ್ಟಪಟ್ಟು ಹಣ ಉಳಿಸಿ, ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಅದೇ ದಿನ ರಾತ್ರಿ ಕಳ್ಳತನವಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೈಕ್ ಮಾಲೀಕ ಚಂದು ಈಗ ಕಂಗಾಲಾಗಿದ್ದಾರೆ. ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಮನೆಯ ಮುಂದೆ ಚಂದು ತನ್ನ ಕೆಟಿಎಂ ಬೈಕ್ ಅನ್ನು ಸುರಕ್ಷಿತವಾಗಿ ಲಾಕ್ ಮಾಡಿ ನಿಲ್ಲಿಸಿದ್ದರು. ಆದರೆ, ಮಧ್ಯರಾತ್ರಿ ಬೇರೆ ಬೈಕ್‌ನಲ್ಲಿ ಬಂದ ಕಳ್ಳರ ಗ್ಯಾಂಗ್, ಯಾರ ಭಯವೂ ಇಲ್ಲದೆ ಕ್ಷಣಾರ್ಧದಲ್ಲಿ ಲಾಕ್ ಓಪನ್ ಮಾಡಿದೆ. ಅತ್ಯಂತ ಸುಲಭವಾಗಿ ಐಷಾರಾಮಿ ಬೈಕ್ ಅನ್ನು ಎಗರಿಸಿ ಪರಾರಿಯಾಗಿದೆ. ಕಳ್ಳರು ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹ್ಯಾಂಡಲ್ ಲಾಕ್ ಇದ್ದರೂ ಸಹ ಕಳ್ಳರು ಅದನ್ನು ಮುರಿದು ಬೈಕ್ ಒಯ್ಯುತ್ತಿರುವ ವಿಧಾನ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

