ಹುಬ್ಬಳ್ಳಿನಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ಸಾರ್ವಜನಿಕ ರಸ್ತೆಗಳಲ್ಲೇ ಯುವತಿಯರ ಮೇಲೆ ಅಸಭ್ಯ ವರ್ತನೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಗರದ ದೇಶಪಾಂಡೆ ನಗರದಲ್ಲಿ ನಡೆದ ಘಟನೆಯಲ್ಲಿ, ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದ ಮೂವರು ಯುವಕರು ಹಾಡಹಗಲೇ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ. ಯುವತಿಯ ಹಿಂಭಾಗ ಮುಟ್ಟಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯಗಳು ಲಭ್ಯವಿದ್ದರೂ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಸಾರ್ವಜನಿಕ ರಸ್ತೆಯಲ್ಲೇ ಇಂತಹ ಕೃತ್ಯಗಳು ನಡೆಯುತ್ತಿರುವುದು ಮಹಿಳೆಯರಲ್ಲಿ ಭೀತಿ ಮೂಡಿಸಿದೆ. ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಪೊಲೀಸರನ್ನು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

