ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟ ಆಗಿ ವಿದ್ಯಾರ್ಥಿನಿ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ. ಮಡುವಿನಹಳ್ಳಿಯ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನಾ (16) ಮೃತರು. ಮಹದೇವಸ್ವಾಮಿ ಅವರು ಪತ್ನಿ, ಮಗಳು ಮತ್ತು ಮಗನ ಜತೆ ಬೈಕ್‌ನಲ್ಲಿ ಬೇಲದಕುಪ್ಪೆ ಮಹದೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಗಣೇಶಪುರ ಬಳಿ ಬೈಕ್‌ನ ಟೈರ್ ಸ್ಫೋಟವಾಗಿದೆ. ನಾಲ್ವರು ರಸ್ತೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಿಂಚನಾ ಸಾವನ್ನಪ್ಪಿದ್ದಾರೆ. ಸಿಂಚನಾ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು.
bigtvnews | Hubli Dharwad News | Kannada News | Karnataka News Hubli News | News In Hubli | Local news

