Breaking News

ಹಾವೇರಿಯಲ್ಲಿ ಗಾಂಧಿ ಪ್ರತಿಮೆ ಧ್ವಂಸ ಕೇಸ್ – ಆರೋಪಿ ಅರೆಸ್ಟ್.!

ಹಾವೇರಿ ನಗರದ ನಗರಸಭೆ ಕಚೇರಿಯ ಆವರಣದಲ್ಲಿದ್ದ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಕಿಡಿಗೇಡಿಯನ್ನು ಹಾವೇರಿ ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವೈಭವ್ ವಿನೋದ್ ರಾಯ್ಕರ್ (28) ಎಂದು ಗುರುತಿಸಲಾಗಿದ್ದು, ಈತ ಭಾನುವಾರ ತಡರಾತ್ರಿ ಈ ಕೃತ್ಯ ಎಸಗಿದ್ದ ಎನ್ನಲಾಗಿದೆ. ನಗರಸಭೆಯ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಷ್ಟ್ರಪಿತನ ಪ್ರತಿಮೆಗೆ ಕಿಡಿಗೇಡಿಯು ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಹಾನಿ ಮಾಡಿದ್ದನು. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರಸಭೆಯ ಪೌರಾಯುಕ್ತರಾದ ಎಚ್. ಕಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ಲಭ್ಯವಿದ್ದ ಸುಳಿವುಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಬಂಧಿತ ವೈಭವ್ ರಾಯ್ಕರ್ ಮಾನಸಿಕ ಅಸ್ವಸ್ಥ ಎಂಬ ವಿಷಯ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸದ್ಯ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *