Breaking News

ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 18 ಲಕ್ಷ ಮೌಲ್ಯದ ಗಾಂಜಾ ವಶ : ಆರೋಪಿ ಅರೆಸ್ಟ್

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂತ ಕೊಲಮ್ಮನಹಳ್ಳಿ ಗ್ರಾಮದ ನಿವಾಸಿ ಪಾಲಯ್ಯ ಜಿ (58) ಎಂಬಾತ ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಒಟ್ಟು 791 ಗಿಡಗಳು. ಅಂದಾಜು 187 ಕೆಜಿ ಗಾಂಜಾ ಸೊಪ್ಪು. ವಶಪಡಿಸಿಕೊಂಡ ಗಾಂಜಾದ ಮಾರುಕಟ್ಟೆ ಮೌಲ್ಯ ಸುಮಾರು 18 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗೂ ಚಳ್ಳಕೆರೆ ಉಪ ವಿಭಾಗದ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ ಹಾಗೂ ನಾಯಕನಹಟ್ಟಿ ಪಿಎಸ್‌ಐ ಜಿ. ಪಾಂಡುರಂಗಪ್ಪ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಅಬಕಾರಿ ಅಧೀಕ್ಷಕ ಕಿರಣ್ ಮತ್ತು ಅವರ ಸಿಬ್ಬಂದಿ ಕೂಡ ಸಾಥ್ ನೀಡಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *