Breaking News

ತುಮಕೂರಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ‘KSRTC’ ಬಸ್ : 40 ಪ್ರಯಾಣಿಕರು ಪಾರು!

ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಎಂಬ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್ಟಿಸಿ ಬಸ್ ಒಂದು ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 40ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಡಿಪೋಗೆ ಈ ಒಂದು ಕೆ ಎಸ್ ಆರ್ ಟಿ ಸಿ ಬಸ್ ಸೇರಿತ್ತು. ಹೊಸದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಬಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ. ಪಲ್ಟಿಯಾದ ಅರಸಕ್ಕೆ ಸರ್ಕಾರಿ ಬಸ ಸಂಪೂರ್ಣ ನುಜ್ಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *