Breaking News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.15 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಆಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ₹1.15 ಕೋಟಿ ಮೌಲ್ಯದ 3.29 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪರಿಶೀಲಿಸಿದಾಗ ಗಾಂಜಾವನ್ನು ಬಚ್ಚಿಟ್ಟಿರುವುದು ಪತ್ತೆಯಾಯಿತು. ಅಧಿಕಾರಿಗಳು ತಕ್ಷಣವೇ ಮಾದಕ ವಸ್ತುವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ 1985 ಅಡಿಯಲ್ಲಿ ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *