Breaking News

ಹೆಣ್ಣು ಮಕ್ಕಳಿಗೆ ಸೇಫ್‌ ಅಲ್ಲ ಸಿಲಿಕಾನ್‌ ಸಿಟಿ – ಹಾಡಹಗಲೇ ನಡುರಸ್ತೆಯಲ್ಲೇ ಬೀದಿ ಕಾಮಣ್ಣರ ದರ್ಬಾರ್‌

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಕೇವಲ ಮಾತಿಗೆ ಸೀಮಿತವಾಗಿದೆಯೇ ಎಂಬ ಆತಂಕ ಮೂಡುವಂತಹ ಘಟನೆಯೊಂದು ನಡೆದಿದೆ. ನಗರದ ಕೋಗಿಲು ಮುಖ್ಯರಸ್ತೆಯ ಮಾರುತಿ ನಗರದಲ್ಲಿ ಹಾಡಹಗಲೇ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಮಾರುತಿ ನಗರದ ಕೋಗಿಲು ಮುಖ್ಯರಸ್ತೆಯಲ್ಲಿ ಯುವತಿಯರಿಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಜನದಟ್ಟಣೆ ಇರುವ ಪ್ರದೇಶ ಎನ್ನದೆ ಅಸಭ್ಯವಾಗಿ ವರ್ತಿಸಿದ ದುಷ್ಕರ್ಮಿಗಳು, ಯುವತಿಯರನ್ನು ಅನುಚಿತವಾಗಿ ಸ್ಪರ್ಶಿಸಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಜನನಿಬಿಡ ರಸ್ತೆಯಲ್ಲಿಯೇ ಇಂತಹ ಅಸಭ್ಯ ವರ್ತನೆ ನಡೆದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹಾಡಹಗಲೇ ಜನ ಓಡಾಡುವ ಜಾಗದಲ್ಲಿ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ” ಎಂದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸ್ಥಳೀಯರು, ತಕ್ಷಣವೇ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಘಟನೆಯು ಬೆಂಗಳೂರಿನಲ್ಲಿ ಮಹಿಳೆಯರ ಮುಕ್ತ ಸಂಚಾರದ ಮೇಲೆ ಮತ್ತೊಮ್ಮೆ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದ್ದು, ಪೊಲೀಸರು ಮಹಿಳೆಯರ ಸುರಕ್ಷತೆಗಾಗಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *