Breaking News

ಸುಳ್ಳು ಕೇಸ್ ಬೆದರಿಕೆ, ಲಂಚ ಬೇಡಿಕೆ – ಇಬ್ಬರು ಪೊಲೀಸರ ಬಂಧನ

ಬಾಗಲಕೋಟೆ ಜಿಲ್ಲೆಯ ಕೆರೂರ ಪೊಲೀಸ್ ಠಾಣೆಯಲ್ಲಿ ಲಂಚದ ಪ್ರಕರಣ ಭಾರಿ ಸದ್ದು ಮಾಡಿದೆ. ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ನಾಯ್ಕರ ಅವರು 21/04/2026 ರಂದು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಪ್ರಕಾರ, 17/04/2026 ರಂದು ಮುತ್ತಪ್ಪ ಅವರ ಸ್ನೇಹಿತ ಶಂಕ್ರಪ್ಪ ಬೂದಿಹಾಳ ಅವರನ್ನು ಅವರ ಬೈಕ್ ನಂ: KA-29 EC-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಸುಳ್ಳು ಆರೋಪ ಮಾಡಿ ಕೇಸ್ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ. ಬಳಿಕ ₹1,70,000 ಲಂಚಕ್ಕೆ ಬೇಡಿಕೆ ಇಟ್ಟು, ಹಣ ನೀಡಿದರೆ ಮಾತ್ರ ಬೈಕ್ ಬಿಡುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ 22/04/2026 ರಂದು ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ಲಂಚದ ಹಣ ಸ್ವೀಕರಿಸುವಾಗಲೇ ಕೆರೂರ ಠಾಣೆಯ PSI ಭೀಮಪ್ಪ ರಬಕವಿ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಸಂತೋಷ ಬಿರಾದಾರರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ದಾಳಿ ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಪೊಲೀಸ್ ಅಧೀಕ್ಷಕರಾದ ಎಂ.ಬಿ. ನಂದಗಾಂವಿ, IPS ಅವರ ಮಾರ್ಗದರ್ಶನದಲ್ಲಿ ಡಿಎಸ್ಪಿ ಸುರೇಶ್ ರೆಡ್ಡಿ ಮತ್ತು ತಂಡದವರಿಂದ ಯಶಸ್ವಿಯಾಗಿ ನಡೆಸಲಾಯಿತು. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *