Breaking News

ದೆಹಲಿಯಲ್ಲಿ ಆಘಾತಕಾರಿ ಘಟನೆ: ಹಿರಿಯ ಅಧಿಕಾರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ 22 ವರ್ಷದ ಮಗಳು ಬುಧವಾರ ಬೆಳಗ್ಗೆ ಆಗ್ನೇಯ ದೆಹಲಿಯ ವಸಾಹತು ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಎಂಜಿನಿಯರಿಂಗ್ ಮುಗಿಸಿ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಹಿರಿಯ ಅಧಿಕಾರಿಯ ಪುತ್ರಿಯನ್ನು ಕೊಲ್ಲುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಕೃತ್ಯಕ್ಕೆ ಮೊಬೈಲ್ ಫೋನ್ ಚಾರ್ಜಿಂಗ್ ಕೇಬಲ್ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಮನೆಯಲ್ಲಿ ಯುವತಿ ಒಬ್ಬಳೇ ಇದ್ದಳು. ಆಕೆಯ ಪೋಷಕರು ಜಿಮ್‌ಗೆ ಹೋಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಮಾರು ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ತೆಗೆದುಹಾಕಲ್ಪಟ್ಟ ಮನೆ ಕೆಲಸದ ವ್ಯಕ್ತಿಯ ಮೇಲೆ ಅನುಮಾನ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *