ಹೊಸದಿಲ್ಲಿ, : ಹಿರಿಯ ಸರಕಾರಿ ಅಧಿಕಾರಿಯೊಬ್ಬರ 22 ವರ್ಷದ ಪುತ್ರಿ ಆಗ್ನೇಯ ದಿಲ್ಲಿಯ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೊಲೆಯಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಅಧಿಕಾರಿಯ ಪುತ್ರಿ ಎಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹತ್ಯೆಗೈಯುವ ಮುನ್ನ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಯುವತಿಯ ಕತ್ತು ಹಿಸುಕಿ ಹತ್ಯೆಗೈಯಲು ಮೊಬೈಲ್ ಚಾರ್ಜರ್ ನ ಕೇಬಲ್ ಬಳಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆಯುವ ಸಂದರ್ಭ ಮನೆಯಲ್ಲಿ ಯುವತಿ ಮಾತ್ರ ಇದ್ದಳು. ಆಕೆಯ ಪೋಷಕರು ಜಿಮ್ ಗೆ ಹೋಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುಮಾರು ಒಂದೂವರೆ ತಿಂಗಳ ಹಿಂದೆ ಕೆಲಸದಿಂದ ವಜಾ ಮಾಡಲಾದ ಮನೆಯ ಕೆಲಸದಾಳುವಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನ್ನು ಪತ್ತೆ ಹಚ್ಚಲು ತಂಡಗಳನ್ನು ರಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

