Breaking News

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಮುಳಬಾಗಿಲು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮುಳಬಾಗಿಲು ನಗರ ಠಾಣೆಯ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ಪುಂಗನೂರು ಪಟ್ಟಣದ ಆವುಲ ರವಿ (27) ಬಂಧಿತ ಆರೋಪಿ. ಮುಳಬಾಗಿಲಿನ ಮಂಜುನಾಥ ಕಾಲೊನಿ ಸಮೀಪದ ಕಾಲೇಶ ದರ್ಗಾದ ಬಳಿ ನಾಲ್ಕು ಪೊಟ್ಟಣಗಳಲ್ಲಿ 8.40 ಕೆ.ಜಿ ತೂಕದ ಗಾಂಜಾವನ್ನು ಬೈಕ್‌ನಲ್ಲಿ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೃತ್ಯಕ್ಕೆ ಬಳಸಿದ್ದ ವಾಹನ, ಗಾಂಜಾ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ನಗರ ಠಾಣೆ ಇನ್‌ಸ್ಪೆಕ್ಟರ್ ಅಣ್ಣಯ್ಯ, ವೆಂಕಟರಾಘವನ್, ಆನಂದ್, ಸಂತೋಷ್, ನಾಗರಾಜು, ನಾರಾಯಣ ಸ್ವಾಮಿ, ಮಧು, ಸುಬ್ರಮಣಿ ಭಾಗವಹಿಸಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *