ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿನ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆಗೆ ಸಹ ಆರೋಪಿಗಳಾಗಿರುವ ಸುನೀಶ್ ಹೆಗ್ಡೆ, ಪ್ರಸಿದ್ಧ ಶೆಟ್ಟಿ ತಮ್ಮ ಮೇಲಿನ ಆರೋಪ ರದ್ದು ಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎ.25ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲರು, ಎಸ್‌ಐಟಿ ತನಿಖೆಯಲ್ಲಿ ಇವರ ವಿರುದ್ಧ ಆರೋಪ ಕಂಡುಬಂದಿಲ್ಲ. ಹೀಗಾಗಿ ಪ್ರಕರಣ ರದ್ದು ಪಡಿಸಬೇಕೆಂದು ಮನವಿ ಮಾಡಿದರು. ಆದರೆ ಅರ್ಜಿದಾರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರಕಾರಿ ಅಭಿಯೋಜಕ ಪ್ರಸನ್ನಕುಮಾರ್, ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪಪಟ್ಟಿ ದಾಖಲಿಸಲಾಗಿದೆ. ಉಳಿದಂತೆ ಪ್ರಕರಣ ರದ್ದು ಕೋರಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆ ಮುಂದೂಡಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

