Breaking News

ಷೇರು ಮಾರುಕಟ್ಟೆಯಲ್ಲಿ ಲಕ್ಷಾಂತರ ರೂ. ನಷ್ಟ ; ಮನನೊಂದು ಸಿದ್ದಾಪುರದಲ್ಲಿ ಯುವಕ ಆತ್ಮಹತ್ಯೆ

ಉತ್ತರ ಕನ್ನಡ : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿ ಭಾರೀ ಪ್ರಮಾಣದ ನಷ್ಟ ಅನುಭವಿಸಿದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರ ನಿವಾಸಿ ಹರ್ಷವರ್ಧನ್ (22) ಮೃತಪಟ್ಟ ಯುವಕನಾಗಿದ್ದು, ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಉಂಟಾದ ಹಣಕಾಸಿನ ಮುಗ್ಗಟ್ಟೇ ಈ ತೀವ್ರ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದೆ. ಮೃತಯುವಕನನ್ನು ಹರ್ಷವರ್ಧನ್ (22) ಎಂದು ಗುರುತಿಸಲಾಗಿದೆ.
ಹರ್ಷವರ್ಧನ್ ತನ್ನ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದನು. ಈ ಹೂಡಿಕೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದರಿಂದ ತೀವ್ರ ಬೇಸರಗೊಂಡಿದ್ದ ಆತ, ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ತಂದೆ ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *