ಚಿಕ್ಕಮಗಳೂರು: ಅಂಗಡಿ ಪಾಲಾಗುತ್ತಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜನರು ಅನ್ನಭಾಗ್ಯದಲ್ಲಿ ಸಿಕ್ಕ ಅಕ್ಕಿಯನ್ನು ಮಾರಾಟ ಮಾಡಲು ಮುಂದಾಗಿದ್ದು, ಆಟೋ ಚಾಲಕರೊಬ್ಬರು ಕ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದರು.ಆದರೆ ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿ 4 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿಯನ್ನು ಆಟೋದಲ್ಲಿ ಸಾಗಿಸಲಾಗುತ್ತಿತ್ತು. ಈ ಅಕ್ಕಿಗೆ ಯಾವುದೇ ಬಿಲ್ ಇಲ್ಲದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜನರಿಂದ ಸಂಗ್ರಹಿಸಿದ ಅಕ್ಕಿಯನ್ನು ನಗರದ ಅಂಗಡಿಯೊಂದಕ್ಕೆ ಮಾರಾಟಕ್ಕೆ ಸಿದ್ಧತೆ ಮಾಡಲಾಗಿತ್ತು. ಅಕ್ಕಿ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

