Breaking News

ಹಾವೇರಿಯಲ್ಲಿ ಭೀಕರ ಅಪಘಾತ.. ಓರ್ವ ವ್ಯಕ್ತಿ ಸಜೀವ ದಹನ..!

ಹಾವೇರಿ : ಹಾವೇರಿಯಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾನೆ. ಹಿರೇಕೆರೂರು ತಾಲೂಕಿನ‌ ಕೋಡ ಗ್ರಾಮದ ಬಳಿ ಘಟನೆ ಬುಧವಾರ ಘಟನೆ ನಡೆದಿದೆ. 48 ವರ್ಷದ ಭಾಷಾಸಾಬ್‌ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೊಲೆರೋ ಮತ್ತು ಇಟ್ಟಿಗೆ ತುಂಬಿದ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಬೊಲೆರೋ ವಾಹನ ಚಾಲಕ ಚಿಕ್ಕೆರೂರು ಗ್ರಾಮದ ನಿವಾಸಿ ಭಾಷಾಸಾಬ್‌ ಸಜೀವ ದಹನಗೊಂಡರೆ, ಮಣಿಕಂಠ, ಸುರೇಶ, ಯೊಗೇಶ್ವರ ಮತ್ತು ನಾಸೀರ್​ಸಾಬ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಹಿರೇಕೆರೂರು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಸದ್ಯ ಹಿರೇಕೆರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *