Breaking News

10,000 ಲಂಚಕ್ಕೆ ಬೇಡಿಕೆ : ಕಲಬುರಗಿಯಲ್ಲಿ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ : ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಸವ ವಸತಿ ಯೋಜನೆಯ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಘಟನೆಯ ವಿವರ: ಮಳ್ಳಿ ಗ್ರಾಮದ ಮಲ್ಲಿಕಾರ್ಜುನ ಎಂಬುವವರ ಸಹೋದರನ ಮನೆ ಬಿಲ್ ಮಾಡುವ ಕೆಲಸಕ್ಕಾಗಿ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಈ ಪೈಕಿ 5 ಸಾವಿರ ರೂಪಾಯಿಯನ್ನು ನಗದು ರೂಪದಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಳಿದ ಮೂರು ಸಾವಿರ ರೂಪಾಯಿಯನ್ನು ಈ ಹಿಂದೆಯೇ ಫೋನ್ ಪೇ ಮೂಲಕ ಪಡೆದುಕೊಂಡಿದ್ದ ಎಂದು ತಿಳಿದುಬಂದಿದೆ. ಲೋಕಾಯುಕ್ತ ತನಿಖಾಧಿಕಾರಿ ಮುರುಗುಂಡಿ ಅವರ ನೇತೃತ್ವದ ತಂಡವು ಈ ಕಾರ್ಯಾಚರಣೆ ನಡೆಸಿದ್ದು, ಲಂಚಕೋರ ಕಂಪ್ಯೂಟರ್ ಆಪರೇಟರ್‌ನನ್ನು ಸಾಕ್ಷಿ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *