ರಾಮನಗರ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮವಾಗಿದೆರಾಮನಗರದ ವಡೇರಹಳ್ಳಿ ಬಳಿ ಘಟನೆ ನಡೆದಿದೆ. ವಿಶೇಷ ಚೇತನರಿಗೆ ನೀಡಲು ಸರ್ಕಾರದ CSR ಅನುದಾನದಡಿಯಲ್ಲಿ ಟೊಯೋಟಾ ಕಂಪನಿಯ 4 ಚಕ್ರದ 32 ವಾಹನಗಳನ್ನು ಖರೀದಿಸಿ ಭೋಜರಾಜ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಇಡಲಾಗಿತ್ತು. ಗುರುವಾರ ಏಕಾಏಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಚಕ್ರದ 32 ವಾಹನಗಳ ಪೈಕಿ 10 ವಾಹನಗಳು ಸುಟ್ಟು ಭಸ್ಮವಾಗಿವೆ. ಇನ್ನೇನು ಕೆಲವೇ ದಿನಗಳಲ್ಲಿ ವಿಶೇಷ ಚೇತನರಿಗೆ ಈ ವಾಹನಗಳನ್ನು ಹಸ್ತಾಂತರಿಸಬೇಕಿತ್ತು. ಆದ್ರೆ, ದುರದೃಷ್ಟವಶಾತ್ ಅವರ ಕೈ ಸೇರುವ ಮೊದಲೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿಯನ್ನು ನಂದಿಸಿದ್ದು, ಕೇಸ್ ಸಂಬಂಧ ಸಮಗ್ರ ತನಿಖೆಗೆ ಒತ್ತಾಯ ಕೇಳಿಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

