ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿರುವ ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ಅವರು ವಿನಯ ಕುಲಕರ್ಣಿ ಪರ ವಕಾಲತ್ತು ವಹಿಸಿದ್ದಾರೆ. ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಮಾನಿಸಿರುವ ಜನ ಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಈ ಶಿಕ್ಷೆ ವಿಧಿಸಿ ಆದೇಶಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

