Breaking News

ಸಿಲೆಂಡರ್‌ ಅಕ್ರಮ ಸಂಗ್ರಹ: ಶಿಕ್ಷೆ ಪ್ರಕಟ

ರಾಣೆಬೆನ್ನೂರು: ಪಟ್ಟಣದ ಹನಗೋಡಿಮಠ ಓಣಿಯ ಶಿವಕುಮಾರ ಚನ್ನಯ್ಯ ಹಿರೇಮಠ ಹಾಗೂ ನಾಗರಾಜ ನಾಗಯ್ಯ ಹನಗೋಡಿಮಠ ಅವರು ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿದ ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಮಹಾಂತೇಶ ಭೂಸಗೋಳ ಅವರು ಶನಿವಾರ ಅಪರಾಧಿಗಳಿಗೆ ತಲಾ 5 ವರ್ಷ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದ್ದಾರೆ. ಹನಗೋಡಿಮಠರ ಓಣಿಯ ಗೋದಾಮಿನಲ್ಲಿ ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ ಅಕ್ರಮವಾಗಿ ಸಂಗ್ರಹಿಸಿದ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕರು ಹಾಗೂ ಪೊಲೀಸರು 2013ರ ಅ.02ರಂದು ದಾಳಿ ನಡೆಸಿದ್ದರು. ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಎಸ್‌.ಎಂ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *