Breaking News

ಎಂಡಿಎಂಎ ಮಾರಾಟ ಯತ್ನ: ಬಂಧನ

ಬೆಂಗಳೂರು: ವೀರನಗರ ಪೇರ್ಲ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಕುಳಿತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಯುವಕನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆಮೊಹಮ್ಮದ್ ಗುಲ್ ಝಹೀಮ್ ಬಂಧಿತ ಆರೋಪಿ. ಕಂಕನಾಡಿ ನಗರ ಠಾಣೆ ಪೊಲೀಸರು ಗಸ್ತು ಕರ್ತವ್ಯ ದಲ್ಲಿರುವಾಗ ಬಜಾಲ್ ವೀರ ನಗರ ಕಡೆಗೆ ಹೋಗುವ ಪೇರ್ಲ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಕುಳಿತ್ತಿದ್ದಾತ ಪೊಲೀಸ್ ವಾಹನ ನೋಡಿ ಓಡಿ ಹೋಗಲು ಯತ್ನಿಸಿದ್ದಾನೆ.ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು, ಪರಿಶೀಲಿಸಿದಾಗ 65.78 ಗ್ರಾಂ ತೂಕದ, 6,57,800 ರೂ. ಅಂದಾಜು ಮೌಲ್ಯದ ಎಂಡಿಎಂಎ ಪತ್ತೆಯಾಗಿದೆ. ಜತೆಗೆ 25 ಸಣ್ಣ ಜಿಪ್ ಲಾಕ್ ಕವರ್ ಗಳು, ಬ್ಯಾಟರಿ ಚಾಲಿತ ತೂಕ ಮಾಪನ ಯಂತ್ರ, ಎಲೆಕ್ಟ್ರಿಕ್ ಸ್ಕೂಟರ್ ಸೇರಿ 8,08,100 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿಚಾರಣೆ ವೇಳೆ ಬೆಂಗಳೂರಿನ ಅಪರಿಚಿತ ವ್ಯಕ್ತಿಯಿಂದ ವಾಣಿಜ್ಯ ಪ್ರಮಾಣದಲ್ಲಿ ಖರೀದಿಸಿಕೊಂಡು ಬಂದು ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *