ಕಾರ್ಕಳ: ಪತ್ತೊಂಜಿ ಕಟ್ಟೆ ಎಂಬಲ್ಲಿ ಎಪ್ರಿಲ್ 23ರಂದು ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬೇಧಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈರಂಪಳ್ಳಿ ಗ್ರಾಮದ ಆನಂದ ಕುಲಾಲ್ (40) ಹಾಗೂ ಕಳವು ಮಾಡಿದ ಚಿನ್ನಾಭರಣವನ್ನು ಖರೀದಿಸಿದ ಜಯರಾಮ ಆಚಾರ್ಯ (54) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಸುಮಾರು ರೂ. 5.60 ಲಕ್ಷ ಮೌಲ್ಯದ 39 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪ್ರಿಲ್ 23ರಂದು ಪತ್ತೊಂಜಿಕಟ್ಟೆ ನಿವಾಸಿ ಶಂಕರ ಕುಲಾಲ್ ಎಂಬವರ ಮನೆಯಲ್ಲಿ ಈ ಕಳ್ಳತನ ಪ್ರಕರಣ ನಡೆದಿತ್ತು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

