Breaking News

ಕುಂಟಿಕಾನ ಮಾದಕವಸ್ತು ಸೇವನೆ ಮೂವರ ಬಂಧನ

ಮಂಗಳೂರು: ಕುಂಟಿಕಾನ ಬಸ್ಸು ತಂಗುದಾಣದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಆರೋಪದಡಿ ಮೂವರನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಯೆಯ್ಯಡಿ ಪದವು ಗುಂಡಳಿಕೆ ನಿವಾಸಿ ಅಭಿರಾಜ್ (38), ಸುಳ್ಯ ಐವರ್ನಾಡು ನಿವಾಸಿ ಎನ್.ಬಿ. ಲೋಕೇಶ್ (19), ಮೂಲ್ಕಿ ಕಾರ್ನಾಡು ನಿವಾಸಿ ಅರವಿಂದ್ (33) ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ಆರೋಪಿಗಳನ್ನು ವಿಚಾರಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂವರು ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *