Breaking News

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ಮಡಿಕೇರಿ: ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ವರದಿಯಾಗಿದೆ. ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾದ ಟೀಚರ್ ಅನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *