Breaking News

ಗರುಡ ಗ್ಯಾಂಗ್‌ ಸದಸ್ಯನ ಬಂಧನ

ಉಡುಪಿ: ಗರುಡ ಗ್ಯಾಂಗ್‌ನ ಸಕ್ರಿಯ ಸದಸ್ಯ ಹಾಗೂ ಕಿರಿಮಂಜೇಶ್ವರ ಗ್ರಾಮ ನಿವಾಸಿ ಮಹಮ್ಮದ್‌ ಅಲ್ಫಾಜ್‌ (25) ಎಂಬುವವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೀಡಿರುವ ವರದಿಯ ಮೇರೆಗೆ ಜಿಲ್ಲಾಧಿಕಾರಿ ಬಂಧನ ಆದೇಶ ಹೊರಡಿಸಿದ್ದರು. ಬಂಧಿತ ಆರೋಪಿಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರಿಸಲು ಆದೇಶಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಶಿರ್ವ, ಗಂಗೊಳ್ಳಿ, ಬೈಂದೂರು, ಉಡುಪಿ ನಗರ, ಕುಂದಾಪುರ ಗ್ರಾಮಾಂತರ, ಕುಂದಾಪುರ ನಗರ ಠಾಣೆಯಲ್ಲಿ ಹಾಗೂ ನೆರೆಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರ ಠಾಣೆಗಳಲ್ಲಿ ಕೊಲೆಯತ್ನ, ದರೋಡೆ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಅವುಗಳ ಪೈಕಿ 1 ಪ್ರಕರಣ ಖುಲಾಸೆಯಾಗಿದ್ದು, 8 ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿವೆ. ಒಂದು ಪ್ರಕರಣ ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *