ಉಡುಪಿ ಎಪ್ರಿಲ್ 26: ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಟ್ಟಡದ ಕೆಳಮಹಡಿಯಲ್ಲಿರುವ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ಶಾಪ್ ಹಾಗೂ ಪಕ್ಕದ ಹಾರ್ಡ್‌ವೇರ್ ಅಂಗಡಿಯಲ್ಲಿ ಮೊದಲು ಬೆಂಕಿ .ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮಳಿಗೆಗೆ ಆವರಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬೆಲೆಬಾಳುವ ಮೊಬೈಲ್ ಫೋನ್‌ಗಳು, ಬಿಡಿಭಾಗಗಳು ಮತ್ತು ಹಾರ್ಡ್‌ವೇರ್ ಪರಿಕರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಪಕ್ಕದ ಇತರ ಮಳಿಗೆಗಳಿಗೆ ಬೆಂಕಿ ಹರಡುವುದು ತಪ್ಪಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

