Breaking News

ಅಂತರರಾಜ್ಯ ಕಳ್ಳನ ಬಂಧನ

ಉಡುಪಿ: ಬೈಂದೂರಿನ ಪಡುವರಿ ಗ್ರಾಮದ ಗುರುಕಿರಣ್‌ ಪಟ್ವಾಲ್‌ ಎಂಬುವವರ ಮನೆಯೊಳಗೆ ನುಗ್ಗಿ ನಗದು, ಚಿನ್ನಾಭರಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಂತರರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.ಕಾಪು ಮಲ್ಲಾರುವಿನ ಉಮೇಶ್‌ ಬಳೆಗಾರ ಬಂಧಿತ ಆರೋಪಿ. ಆರೋಪಿಯಿಂದ ಸುಮಾರು ₹2.81 ಲಕ್ಷ ಮೌಲ್ಯದ ಒಟ್ಟು 22 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಉಮೇಶ್‌ ಬಳೆಗಾರನ ವಿರುದ್ದ ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್‌ ಠಾಣೆಗಳಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. 23 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *