Breaking News

ಮಚ್ಚಿನಿಂದ ಬೀದಿ ನಾಯಿಯ ಕೊಚ್ಚಿದ ಎಳನೀರು ವ್ಯಾಪಾರಿ!

ಬೆಂಗಳೂರು: ಬೀದಿ ನಾಯಿ ಮೇಲೆ ಎಳನೀರು ವ್ಯಾಪಾರಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಭಾರತಿನಗರ ನಿವಾಸಿ ವಿಕಾಸ್‌ ಎಂಬುವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಏ.25 ರ ಬೆಳಗ್ಗೆ 8.30ಕ್ಕೆ ಈ ಘಟನೆ ನಡೆದಿದ್ದು ಶ್ವಾನದ ಮೇಲೆ ಹಲ್ಲೆ ನಡೆಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯ ನಾಗರಿಕರೊಬ್ಬರು ಬೀದಿ ನಾಯಿಯನ್ನು ಸಾಕಿಕೊಂಡಿದ್ದರು. ಶನಿವಾರ ಬೆಳಗ್ಗೆ ನಾಯಿ ಎಳೆನೀರು ವ್ಯಾಪಾರಿಯನ್ನು ನೋಡಿ ಬೊಗಳಿದೆ. ಅದರಿಂದ ಆಕ್ರೋಶಗೊಂಡ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಜತೆಗೆ ಹಿರಿಯ ನಾಗರಿಕರಿಗೆ ಬೆದರಿಕೆ ಹಾಕಿದ್ದಾನೆ. ಗಾಯಗೊಂಡಿದ್ದ ನಾಯಿಗೆ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಕೆ.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *