ಹಾಸನ : ನಗರದಲ್ಲಿರುವ ಸರ್ಕಾರಿ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ಮೇಲೆ ದೌರ್ಜನ್ಯ ಎಸಗಿದ್ದು , ಅಮಾನವೀಯವಾಗಿ ನಡೆಸಿಕೊಂಡು ರ‍್ಯಾಗಿಂಗ್ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಾಸ್ಟೆಲ್ ಆವರಣದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಪಶುವೈದ್ಯಕೀಯ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಈ ವಿಷಯವು ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ಬರುತ್ತಿದ್ದಂತೆಯೇ, ಪ್ರಾಥಮಿಕ ತನಿಖೆ ನಡೆಸಿ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಈ ವೇಳೆ ರ್ಯಾಗಿಂಗ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾಲೇಜಿನ ಶಿಸ್ತು ಸಮಿತಿ ಅತ್ಯಂತ ಕಠಿಣ ನಿರ್ಧಾರ ಕೈಗೊಂಡಿದ್ದು, ಈ ಅಮಾನವೀಯ ಕೃತ್ಯದಲ್ಲಿ ತೊಡಗಿದ್ದ ಏಳು ಮಂದಿ ಹಿರಿಯ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ ಮತ್ತು ಹಾಸ್ಟೆಲ್‌ನಿಂದಲೂ ಹೊರಹಾಕಲು ಆದೇಶಿಸಲಾಗಿದೆ. ಕ್ಯಾಂಪಸ್‌ನಲ್ಲಿ ಶಿಸ್ತು ಕಾಪಾಡಲು ಮತ್ತು ಕಿರಿಯ ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಲು ಈ ಕ್ರಮ ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

