Breaking News

ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ವಶ: ಬಂಧಿತ ಟಿಎಂಸಿ ಕಾರ್ಯಕರ್ತ?

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ 24 ಪರಗಣ ಜಿಲ್ಲೆಯ ಭಾಂಗರ್‌ನಲ್ಲಿ ತೃಣ ಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ಎನ್ನಲಾದ ವ್ಯಕ್ತಿಯೊಬ್ಬನ ಮನೆಯಿಂದ ಸುಮಾರು 100 ಕಚ್ಚಾ ಬಾಂಬ್‌ಗಳನ್ನು ರವಿವಾರ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ರಫಿಕುಲ್ ಇಸ್ಲಾಂ ಎಂಬಾತನ ಮನೆಯಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ, ಇಂತಹ ಸ್ಫೋಟಕಗಳ ದಾಸ್ತಾನನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳುವಂತೆ ಚುನಾವಣಾ ಆಯೋಗವು 24 ಗಂಟೆಗಳ ಗಡುವನ್ನು ಅಧಿಕಾರಿಗಳಿಗೆ ನೀಡಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *