Breaking News

12 ಗಂಟೆಯೊಳಗೆ ಆರೋಪಿ ಬಂಧನ

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ ಚಾನಲ್ ಪ್ರದೇಶದ ಬಳಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ಹಣ, ಆಭರಣ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು 12 ಗಂಟೆಯೊಳಗೆ ಬಂಧಿಸಿದ್ದಾರೆ. ಏ. 24ರ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಲಿಂಗತ್ವ ಅಲ್ಪಸಂಖ್ಯಾತರರೊಬ್ಬರನ್ನು ಆಟೊದಲ್ಲಿ ಕರೆದುಕೊಂಡು ಹೋಗಿ ₹4,000 ನಗದು, ಮೊಬೈಲ್, ಕೊರಳಲ್ಲಿದ್ದ ಸರ ಹಾಗೂ ಬಂಗಾರದ ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದಈ ಕುರಿತು ಏ. 25ರಂದು ದೂರು ದಾಖಲಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನಗರದ ಹಳೆ ಮಂಡ್ಲಿ ನಿವಾಸಿ ದೇವರಾಜ (27) ಎಂಬಾತನನ್ನು ಬಂಧಿಸಿ, ಆರೋಪಿಯಿಂದ ₹20,000 ಮೌಲ್ಯದ ಮೊಬೈಲ್, ಕೃತ್ಯಕ್ಕೆ ಬಳಸಿದ ₹3 ಲಕ್ಷ ಮೌಲ್ಯದ ಆಟೊ ಹಾಗೂ ಒಂದು ಚಾಕು ಸೇರಿದಂತೆ ಒಟ್ಟು ₹3.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *